ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸುಂಕ ವಸೂಲಿ ಕೇಂದ್ರದಲ್ಲಿ ಸ್ಥಳೀಯರಿಗೆ ವಿನಾಯಿತಿ ನೀಡಿ; ರಘುಪತಿ ಭಟ್

ಉಡುಪಿ: ಉಡುಪಿ ಜಿಪಂ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಸಭೆ ನಡೆಯಿತು.ಶಾಸಕ ಕೆ.ರಘುಪತಿ ಭಟ್ ಭಾಗವಹಿಸಿ ಮಾತನಾಡಿ, ಸುಂಕ ವಸೂಲಿ ಕೇಂದ್ರಗಳಲ್ಲಿ 5 ಕಿ.ಮೀ. ವ್ಯಾಪ್ತಿ ಒಳಗಿನ ಸ್ಥಳೀಯರಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕು. ಅಲ್ಲದೆ, ಸುಂಕ ವಸೂಲಿ ಕೇಂದ್ರದಲ್ಲಿ ಸ್ಥಳೀಯರನ್ನೇ ಸುಂಕ ವಸೂಲಿದಾರರನ್ನಾಗಿ ನೇಮಿಸಬೇಕು ಎಂದು ಸಲಹೆ ನೀಡಿದರು.

ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆ ವಹಿಸಿದ್ದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಜಿಪಂ ಅಧ್ಯಕ್ಷ ದಿನಕರ್ ಬಾಬು, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ., ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ಮತ್ತು ರಾಷ್ಟ್ರೀಯ ಹೆದ್ದಾರಿ ಜಾಗೃತಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

22/02/2021 04:46 pm

Cinque Terre

4.59 K

Cinque Terre

0

ಸಂಬಂಧಿತ ಸುದ್ದಿ