ಉಡುಪಿ: ಜಿಲ್ಲಾ ಪಂಚಾಯತ್ ಡಾll ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ ಇಲಾಖೆಯ ಮೇಲಾಧಿಕಾರಿಗಳಿಗೆ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಸ್ಪಷ್ಟ ನಿರ್ದೇಶನ ನೀಡಲಾಯಿತು.
ಉಡುಪಿ ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಅಧ್ಯಕ್ಷತೆ ವಹಿಸಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
22/02/2021 07:44 pm