ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರಗ ಸಮುದಾಯದ ಮನೆಗೆ ವಿದ್ಯುತ್ ಸಂಪರ್ಕ- ಶಾಸಕ ರಘುಪತಿ ಭಟ್ ಚಾಲನೆ

ಉಡುಪಿ: ಶಾಸಕ ಶ್ರೀ ಕೆ. ರಘುಪತಿ ಭಟ್ ನೇತೃತ್ವದ ಆಸರೆ ಚಾರಿಟೇಬಲ್ ಟ್ರಸ್ಟ್ (ರಿ.) ಕಡಿಯಾಳಿ ಉಡುಪಿ ಇದರ ವತಿಯಿಂದ ಶಾಸಕ ಶ್ರೀ ಕೆ ರಘುಪತಿ ಭಟ್ ಅವರ ಜನ್ಮದಿನದ ಪ್ರಯುಕ್ತ ಸುಬ್ರಹ್ಮಣ್ಯನಗರ ವಾರ್ಡಿನ ಕೊರಗ ಸಮುದಾಯದ ನರ್ಸಿ ಎಂಬುವವರ ಮನೆಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದ್ದು ಇಂದು ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಸ್ಥಳೀಯ ನಗರಸಭಾ ಸದಸ್ಯರಾದ ಜಯಂತಿ, ಬಾಲಕೃಷ್ಣ ಶೆಟ್ಟಿ, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರಾದ ಸುಬೇದ, ಶಾಸಕರ ಧರ್ಮಪತ್ನಿ ಶಿಲ್ಪಾ ಆರ್. ಭಟ್, ಮಗನಾದ ರೆಯ್ಯಾನ್ಶ್ ಮತ್ತು ಕಂದಾಯ ನಿರೀಕ್ಷಕರಾದ ಉಪೇಂದ್ರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

24/02/2021 07:25 pm

Cinque Terre

7.1 K

Cinque Terre

0

ಸಂಬಂಧಿತ ಸುದ್ದಿ