ಉಡುಪಿ:ಒಂದು ಸಮಾಜದ ಅಭಿವೃದ್ಧಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ ಸಮಾಜದ ಆಸಕ್ತ ಕಟ್ಟಕಡೆಯ ವ್ಯಕ್ತಿಗೂ ಸಹಾಯ ಹಸ್ತ ನೀಡಿದಲ್ಲಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸಮಾಜಕ್ಕೆ ಸಂಘಟನೆ ಅವಶ್ಯಕ. ಪ್ರಸ್ತುತ ದಿನಗಳಲ್ಲಿ ಬ್ರಾಹ್ಮಣ ಸಮಾಜ ಜಾಗೃತಿ ಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಇಂದು ನಡೆದ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.) ಇದರ ಕಲ್ಸಂಕ ಗುಂಡಿಬೈಲಿನಲ್ಲಿ ನೂತನವಾಗಿ ನಿರ್ಮಿಸಲಾದ ಬ್ರಾಹ್ಮಿ ಸಭಾಭವನ ಸಮರ್ಪಣಾ ಹಾಗೂ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ವೇ ಜನಃ ಸುಖಿನೋ ಭವಂತು" ಎಂಬ ವಾಣಿಯಂತೆ ಬ್ರಾಹ್ಮಣರು ಸಮಸ್ತ ಹಿಂದೂ ಧರ್ಮದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದವರು. ಜಾತಿಯಿಂದ ಹಿಂದೂ ಧರ್ಮ ಒಡೆಯದಂತೆ ಬ್ರಾಹ್ಮಣ ಸಮಾಜ ಸಮಸ್ತ ಹಿಂದೂ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದ ಅವರು ಬ್ರಾಹ್ಮಿ ಸಭಾಭವನ ನಿರ್ಮಿಸುವಲ್ಲಿ ಯುವ ಬ್ರಾಹ್ಮಣ ಪರಿಷತ್ (ರಿ.) ಕಾರ್ಯವೈಖರಿಯನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಶ್ರೀ ಪಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಶ್ರೀ ಕಾಣಿಯೂರು ಮಠದ ಶ್ರೀ ಶ್ರೀ ವಿಧ್ಯಾವಲ್ಲಭತಿರ್ಥ ಶ್ರೀಪಾದರು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಸಚ್ಚಿದಾನಂದ ಮೂರ್ತಿ, ಕರ್ನಾಟಕ ಬ್ಯಾಂಕ್ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಂ.ಎಸ್ ಮಹಾಬಲೇಶ್ವರ, ಉಪಸ್ಥಿತರಿದ್ದರು.
Kshetra Samachara
28/02/2021 03:46 pm