ಮಂಗಳೂರು: ಪುತ್ತೂರು ತಾಲೂಕಿನ ಕಬಕ ಗ್ರಾಪಂ ಸ್ವಾತಂತ್ರ್ಯ ರಥದಲ್ಲಿ ಸಾವರ್ಕರ್ ಫೋಟೋ ತೆಗೆಯಬೇಕೆಂದು ದಾಂಧಲೆ ನಡೆಸಿರುವ ಎಸ್ ಡಿಪಿಐ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವೆ ಎಂದು ಸಚಿವ ಅಂಗಾರ ಎಸ್. ಹೇಳಿದ್ದಾರೆ.
75 ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಅಂಗವಾಗಿ ಪುತ್ತೂರು ತಾಲೂಕಿನ ಕಬಕ ಗ್ರಾಪಂ ವತಿಯಿಂದ ನಡೆದ ರಥಯಾತ್ರೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಅಳವಡಿಸಲಾಗಿತ್ತು. ಆದರೆ ಕಬಕ ಗ್ರಾಪಂನ ಎಸ್ ಡಿಪಿಐ ಸದಸ್ಯ ನಜೀರ್ ವಿರೋಧಿಸಿದ್ದಾರೆ. ಅಲ್ಲದೆ ಅಜೀದ್, ನೌಶಾದ್, ಅದ್ದು, ಸಮೀರ್ ಇವರುಗಳು ಪಂಚಾಯತ್ ಅಧ್ಯಕ್ಷ ಹಾಗೂ ಅಧ್ಯಕ್ಷರ ಮೇಲೆ ಹಲ್ಲೆಗೆ ಯತ್ನಿಸಿರುವುದನ್ನು ಉಗ್ರವಾಗಿ ಖಂಡಿಸುತ್ತೇನೆ. ಅದೇ ರೀತಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಸಚಿವ ಅಂಗಾರ ಎಸ್. ಹೇಳಿದರು.
Kshetra Samachara
15/08/2021 08:42 pm