ಉಡುಪಿ: ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ಅವರಿಗೆ ಇಂದು ಬ್ರಹ್ಮಾವರ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ, ಉಡುಪಿ ಗ್ರಾಮಾಂತರ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಶಾಸಕ ರಘುಪತಿ ಭಟ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಬಿ.ಎನ್ ಶಂಕರ್ ಪೂಜಾರಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಹಾಗೂ ಪಕ್ಷದ ಮುಖಂಡರು, ಪ್ರಮುಖರು, ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
23/08/2021 06:28 pm