ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೃಷಿ ವಲಯದಲ್ಲಿ 10 ಸೆಂಟ್ಸ್ ಜಾಗ ಮತ್ತು 3000 ಚದರ ಅಡಿವರೆಗೆ ವಾಸ್ತವ್ಯದ ಮನೆ ನಿರ್ಮಿಸುವವರಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಕೃಷಿ ವಲಯದಿಂದ ವಸತಿ ವಲಯಕ್ಕೆ ಭೂ ಪರಿವರ್ತನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.ಈ ಬಗ್ಗೆ ಸರಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.
ಇಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು. ಈ ಸಂದರ್ಭ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಲಯ ನಿಯಮಾವಳಿಯಲ್ಲಿ ತಿದ್ದುಪಡಿ ತರಲು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆ ಬಗ್ಗೆ ಚರ್ಚಿಸಲಾಯಿತು. ಅದರಲ್ಲಿ ಪ್ರಮುಖವಾಗಿ ವಾಸ್ತವ್ಯದ ಮನೆ ನಿರ್ಮಾಣಕ್ಕೆ 10 ಸೆಂಟ್ಸ್ ವರೆಗಿನ ಕೃಷಿ ವಲಯದಿಂದ ವಸತಿ ವಲಯಕ್ಕೆ ಭೂ ಪರಿವರ್ತನೆ ಮಾಡಲು ಅವಕಾಶವಿಲ್ಲದೆ ಉಂಟಾಗಿರುವ ಸಮಸ್ಯೆ ಕುರಿತು ಸಭೆಯಲ್ಲಿ ಚರ್ಚಿಸಿ ಸಮಿತಿ ಅಧ್ಯಕ್ಷರಾದ ಕೆ. ರಘುಪತಿ ಭಟ್ ಅವರು ಈ ಹಿಂದೆ ಸದನದಲ್ಲಿ ಚರ್ಚಿಸಿರುವಂತೆ 10 ಸೆಂಟ್ಸ್ ವರೆಗಿನ ಕೃಷಿ ವಲಯದಿಂದ ವಸತಿ ವಲಯಕ್ಕೆ ಭೂ ಪರಿವರ್ತನೆ ಮಾಡಲು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅವಕಾಶ ಕಲ್ಪಿಸುವ ಬಗ್ಗೆ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲು ಸೂಚಿಸಿ ಈಗ ಬಗ್ಗೆ ತಕ್ಷಣ ಸೂಕ್ತ ಜರುಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
Kshetra Samachara
26/08/2021 07:54 pm