ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ಯಾಂಪಸ್ ಫ್ರಂಟ್ ನಿಂದ ಉಡುಪಿ ಜಿಲ್ಲೆಯಾದ್ಯಂತ ಭಿತ್ತಿಪತ್ರ ಪ್ರದರ್ಶನ

ಉಡುಪಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಡೆಸಿದ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ರವರು ಎನ್.ಇ.ಪಿ ಯಲ್ಲಿ ಲೋಪದೋಷಗಳಿದ್ದರೆ ಚರ್ಚೆಗೆ ಬನ್ನಿ ಎಂದು ಆಹ್ವಾನಿಸಿದ ಸವಾಲನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿಗಳು ಸ್ವೀಕರಿಸಿದ್ದಾರೆ. ನಾವು ಚರ್ಚೆಗೆ ತಯಾರಾಗಿದ್ದೇವೆ! ನೀವು ತಯಾರಾಗಿದ್ದೀರಾ? ಎಂಬ ಭಿತ್ತಿಪತ್ರ ಪ್ರದರ್ಶನ ಮಾಡುವ ಮುಖಾಂತರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ವಿರುಧ್ದ ಪ್ರತಿಭಟಿಸಿದರು.

ಖಾಸಗೀಕರಣ, ಕೇಂದ್ರೀಕರಣ ಹಾಗೂ ಕೇಸರೀಕರಣಕ್ಕೆ ಒತ್ತನ್ನು ನೀಡುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಒಪ್ಪಲು ಸಾಧ್ಯವಿಲ್ಲ. ಈ ಬಗ್ಗೆ ಇರುವ ಚರ್ಚೆಗೆ ಮುಕ್ತವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಿದ್ದವಿದೆ, ಉನ್ನತ ಶಿಕ್ಷಣ ಸಚಿವರು ತಯಾರಾಗಿದ್ದೀರಾ? ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲೆಯ ಸದಸ್ಯರು ಭಿತ್ತಿಪತ್ರ ಪ್ರದರ್ಶನ ಮಾಡುವ ಮೂಲಕ ಕೇಳಿದರು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್, ಜಿಲ್ಲಾ ಸಮಿತಿ ಸದಸ್ಯ ಅರ್ಫಾಝ್, ನಝ್ ಹತ್ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/09/2021 02:30 pm

Cinque Terre

1.75 K

Cinque Terre

2

ಸಂಬಂಧಿತ ಸುದ್ದಿ