ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅನಗತ್ಯ ಖರ್ಚು ವೆಚ್ಚ ನಿರ್ಬಂಧಿಸಲು ಯೋಚನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅನಗತ್ಯ ಖರ್ಚು ವೆಚ್ಚ ನಿರ್ಬಂಧಿಸಲು ಯೋಚನೆ ಮಾಡಿದ್ದೇವೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ದೂರಗಾಮಿ ಯೋಜನೆಗಳನ್ನು ಜಾರಿಗೊಳಿಸಿ ಕಟ್ಟಕಡೆಯ ಬಡವರಿಗೆ ಮೂಲಭೂತ ಸೌಕರ್ಯ ಮತ್ತು ಬದುಕನ್ನು ಕಟ್ಟಿ ಕೊಡುವುದು, ಅವರ ಮಕ್ಕಳಿಗೆ ಶಿಕ್ಷಣ ಕೊಡುವುದು, ಅಸ್ಪøಶ್ಯತೆ ನಿವಾರಿಸುವುದು, ಸಮಾಜದ ಮುಖ್ಯವಾಹಿನಿಗೆ ಅವರನ್ನು ತರುವುದು ನನ್ನ ಮತ್ತು ನಮ್ಮ ಸರಕಾರದ ಗುರಿ ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಲಾಗುವುದು. ಪರಿಶಿಷ್ಟ ಜಾತಿಯ ಶಾಸಕರ ಸಭೆ ಕರೆದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಲಾಖೆಯ ಅಗತ್ಯಗಳ ಕುರಿತು ಚರ್ಚಿಸಿದ್ದಾರೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

08/09/2021 08:33 pm

Cinque Terre

2.5 K

Cinque Terre

0

ಸಂಬಂಧಿತ ಸುದ್ದಿ