ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅರಣ್ಯ ಹುತಾತ್ಮರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

ಉಡುಪಿ:ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ (ರಿ.) ಹಾಗೂ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘ(ರಿ.), ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಆಸ್ಪತ್ರೆ ರಕ್ತನಿಧಿ ಕೇಂದ್ರ ಇವರ ಸಹಯೋಗದೊಂದಿಗೆ ಟೌನ್ ಹಾಲ್ ನಲ್ಲಿ ಇಂದು ಅರಣ್ಯ ಹುತಾತ್ಮರ ಸ್ಮರಣಾರ್ಥ 21ನೇ ವರ್ಷದ ಬೃಹತ್ ರಕ್ತದಾನ ಶಿಬಿರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ರವರು ಭಾಗವಹಿಸಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆಶಿಶ್ ರೆಡ್ಡಿ, ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘ (ರಿ.) ಉಡುಪಿ ಜಿಲ್ಲೆಯ ಅಧ್ಯಕ್ಷರಾದ ನಾಗೇಶ್ ಬಿಲ್ಲವ, ಕರ್ನಾಟಕ ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘ (ರಿ.) ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಕೇಶವ ಪೂಜಾರಿ, ಉಡುಪಿ ಜಿಲ್ಲೆಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಶೇರಿಗಾರ್, ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘ (ರಿ.) ಉಡುಪಿ ಜಿಲ್ಲೆಯ ಗೌರವಾಧ್ಯಕ್ಷರಾದ ಪ್ರಕಾಶ್ ಚಂದ್ರ, ಕರ್ನಾಟಕ ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘ (ರಿ.) ಉಡುಪಿ ಜಿಲ್ಲೆಯ ಗೌರವಾಧ್ಯಕ್ಷರಾದ ಹೆಚ್. ದೇವರಾಜ್ ಪಾಣ, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೀಣಾ ಕುಮಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/09/2021 12:49 pm

Cinque Terre

2.48 K

Cinque Terre

0

ಸಂಬಂಧಿತ ಸುದ್ದಿ