ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಪಂಡಿತ್ ದೀನದಯಾಳ್ ಉಪಾಧ್ಯಾಯರು ದೇಶಕ್ಕಾಗಿ ಬದುಕಿದವರು. ಸಾಮಾನ್ಯ ಕುಟುಂಬದಲ್ಲಿ ಜನಿಸಿ ಅದೆಷ್ಟು ಬುದ್ಧಿವಂತರಾಗಿದ್ದರೂ ಯಾವುದೇ ಉದ್ಯೋಗವನ್ನು ಅರಸದೆ ತನ್ನ ಜೀವನವನ್ನು ರಾಷ್ಟ್ರಕ್ಕಾಗಿ ಸಮರ್ಪಿಸಿಕೊಂಡವರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ 105ನೇ ಜನ್ಮದಿನಾಚರಣೆಯ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಸೇವಾ ಕಾರ್ಯದ ಪ್ರಯುಕ್ತ ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ನೇತೃತ್ವದಲ್ಲಿ ಆಯೋಜಿಸಿದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರೇರಣೆಯನ್ನು ಪಡೆದು ಅದರ ಸೂಚನೆಯ ಮೇರೆಗೆ ಭಾರತೀಯ ಜನ ಸಂಘಕ್ಕೆ ಬಂದು ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ನಿಧನದ ನಂತರ ದೇಶಾದ್ಯಂತ ತನ್ನ ಜವಾಬ್ದಾರಿಯನ್ನು ಹೊತ್ತುಕೊಂಡು ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಕುತಂತ್ರಿಗಳ ಷಡ್ಯಂತ್ರದ ಪಿತೂರಿಗೆ ಬಲಿಯಾದರು. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

ಸೆ.17 ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆಯ ದಿನದಿಂದ ಅ.7ರವರೆಗೆ ನಡೆಯುವ ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಗರಿಷ್ಠ ಸೇವಾ ಕಾರ್ಯಗಳು ನಡೆಯುತ್ತಿರುವುದು ಪ್ರಶಂಸನೀಯ. ಪ್ರಧಾನಿ ಮೋದಿಯವರಿಗೆ ಖುಷಿ ಕೊಡುವ ಕಾರ್ಯ ಸೇವೆ. ಈ ಅಭಿಯಾನದಡಿ ಅ.2ರಂದು ಗಾಂಧಿ ಜಯಂತಿ ಆಚರಣೆಯು ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ. ರಕ್ತದಾನ ಶ್ರೇಷ್ಠ ದಾನ. ಕೊರೊನಾ ಸಂದರ್ಭದಲ್ಲಿಯೂ ಪಕ್ಷದ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿರುವುದು ಅರ್ಥಪೂರ್ಣ. ರಕ್ತದಾನ ಮಾಡಿರುವ ಎಲ್ಲಾ ಕಾರ್ಯಕರ್ತರು ಮತ್ತು ವೈದ್ಯಕೀಯ ತಂಡಕ್ಕೆ ಅಭಿನಂದನೆಗಳು. ಸೇವೆ ಮತ್ತು ಸಮರ್ಪಣ ಅಭಿಯಾನದ ಎಲ್ಲಾ ಸೇವಾ ಕಾರ್ಯಗಳು ಯಶಸ್ವಿಯಾಗಲಿ ಎಂದರು.

Edited By : PublicNext Desk
Kshetra Samachara

Kshetra Samachara

25/09/2021 08:04 pm

Cinque Terre

998

Cinque Terre

0

ಸಂಬಂಧಿತ ಸುದ್ದಿ