ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಸರ್ಕಾರಿ ಭರವಸೆಗಳ ಸಮಿತಿ ಸಭೆ

ಉಡುಪಿ: ಸರ್ಕಾರಿ ಭರವಸೆಗಳ ಸಮಿತಿ ಸಭೆ ಇಂದು ವಿಧಾನ ಸೌಧದಲ್ಲಿ ನಡೆಯಿತು.

ಸಮಿತಿ ಅಧ್ಯಕ್ಷರಾದ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು.

ರಾಕೇಶ್ ಸಿಂಗ್ ಐಎಎಸ್, ಅಪರ ಮುಖ್ಯ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ, ಗೌರವ್ ಗುಪ್ತ, ಆಯುಕ್ತರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಡಾ. ಅಜಯ್ ನಾಗಭೂಷಣ್, ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ, ಜಯರಾಂ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ರಾಜೇಶ್ ಗೌಡ, ಆಯುಕ್ತರು, ಬಿಡಿಎ, ರೇಜು ಎಂ ಟಿ. ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ, ಅರ್ಚನಾ ಎಂ. ಎಸ್. ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

21/10/2021 08:12 pm

Cinque Terre

1.43 K

Cinque Terre

0

ಸಂಬಂಧಿತ ಸುದ್ದಿ