ಉಡುಪಿ: ವಿಧಾನ ಪರಿಷತ್ ಚುನಾವಣೆ ರಂಗೇರುತ್ತಿದ್ದು ಸಹಕಾರಿ ಧುರೀಣ ಎಮ್ .ಎನ್ ರಾಜೇಂದ್ರ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಧುಮುಕಿರುವುದು ಕಾಂಗ್ರೆಸ್ ಮತ್ತು ಬಿಜೆಪಿಯ ಲೆಕ್ಕಾಚಾರ ತಲೆಕೆಳಗಾಗಿಸಿದೆ.ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೊತೆ ಹಿಂದೆ ಗುರುತಿಸಿಕೊಂಡಿದ್ದ ಎಂಎನ್ ಆರ್ ರನ್ನು ಸೆಳೆಯಲು ಉಡುಪಿ ಜಿಲ್ಲಾ ಕಾಂಗ್ರೆಸ್ ಮುಂದಾಗಿದೆ.
ಇಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ,ರಾಜೇಂದ್ರ ಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಜೊತೆ ಭೇಟಿ ಮಾಡಿಸಿದ್ದಾರೆ.ಪರಿಷತ್ ಚುನಾವಣೆ ಟಿಕೆಟ್ ನ್ನು ನೀಡುವಂತೆ ಮನವಿ ಮಾಡಿದ್ದಾರೆ.ಇದಕ್ಕೆ ಡಿಕೆಶಿ ಯಾವ ರೀತಿಯಲ್ಲಿ ಸ್ಪಂದಿಸಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.ಒಟ್ಟಿನಲ್ಲಿ ಕರಾವಳಿಯಲ್ಲಿ ವರ್ಚಸ್ಸು ಕಳೆದುಕೊಂಡಿರುವ ಕಾಂಗ್ರೆಸ್ ರಾಜೇಂದ್ರ ಕುಮಾರ್ ರನ್ನು ಕಣಕ್ಕಿಳಿಸುತ್ತದಾ? ಕಣಕ್ಕಿಳಿಸಿ ಗೆಲ್ಲಿಸುವ ಮೂಲಕ ಗೆಲವಿನ ನಗೆ ಬೀರಿತ್ತಾ ಎಂಬುದನ್ನು ಕಾದು ನೋಡಬೇಕಿದೆ.
Kshetra Samachara
17/11/2021 06:58 pm