ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ:ರೈತ ವಿರೋಧಿ ಕೃಷಿ ಕಾನೂನು ಹಿಂಪಡೆದದ್ದು ಪ್ರಜಾಪ್ರಭುತ್ವಕ್ಕೆ ಸಂದ ಜಯ: ಕಾಂಗ್ರೆಸ್

ಕಾರ್ಕಳ:ಕೇಂದ್ರ ಸರಕಾರ ಕಳೆದ ವರ್ಷ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದ ವಿವಾದಾತ್ಮಕ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂತೆಗೆದು ಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಸಂದ ಜಯ. ಕಾಂಗ್ರೆಸ್ ಇದನ್ನು ಸ್ವಾಗತಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.

ಆದರೆ ಇದು ಪ್ರಧಾನಿ ಮೋದಿ ಸರಕಾರದ ರೈತರ ಕಣ್ಣೊರೆಸುವ ರಾಜಕೀಯ ತಂತ್ರವಾಗಬಾರದು. ಈಗಾಗಲೇ ರಾಷ್ಟ್ರಪತಿಗಳ ಅಂಕಿತದೊಂದಿಗೆ ಜಾರಿಗೆ ಬಂದ ಈ ಕಾನೂನನ್ನು ಮುಂದಿನ ಲೋಕಸಭಾ ಅಧಿವೇಶನದಲ್ಲಿ ಸಾಂವಿಧಾನಿಕ ಮಾನ್ಯತೆಯೊಂದಿಗೆ ಅಧಿಕೃತವಾಗಿ ರದ್ದುಗೊಳಿಸಬೇಕು. ಸರಕಾರ ಈ ಆಶ್ವಾಸನೆಯನ್ನು ಜನರಿಗೆ ನೀಡಬೇಕು. ಇಲ್ಲವಾದಲ್ಲಿ ಮತ್ತೆ ರೈತ ಹೋರಾಟದ ಕಿಚ್ಚು ಭುಗಿಲೇಳುವುದು ಅನಿವಾರ್ಯ ಆದೀತು ಎಂದು ಕಾಂಗ್ರೆಸ್ ಹೇಳಿದೆ.

ಕಳೆದ ಒಂದು ವರ್ಷದಿಂದ ನಡೆದ ಹೋರಾಟದಲ್ಲಿ ಸುಮಾರು 700ಕ್ಕೂ ಹೆಚ್ಚು ರೈತರು ಅಸು ನೀಗಿದ್ದು ಇವರ ಕುಟುಂಬಗಳಿಗೆ ಸರಕಾರ ಸೂಕ್ತ ಪರಿಹಾರ ನೀಡಬೇಕು. ಪ್ರತಿಭಟನೆಯನ್ನು ಹತ್ತಿಕ್ಕಲು ಹುನ್ನಾರ ನಡೆಸಿ ರೈತ ಕುಟುಂಬಗಳ ಕಷ್ಟ ನಷ್ಟಗಳಿಗೆ ಕಾರಣರಾದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳ ಬೇಕು. ಇದರೊಂದಿಗೆ ಈಗಾಲೇ ಜಾರಿಗೆ ತಂದ ವಿದ್ಯುತ್ ಮಸೂದೆಯನ್ನು ರೈತರ ಹಿತದೃಷ್ಠಿಯಿಂದ ಹಿಂತೆಗೆದುಕೊಳ್ಳ ಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

19/11/2021 05:55 pm

Cinque Terre

1.5 K

Cinque Terre

1

ಸಂಬಂಧಿತ ಸುದ್ದಿ