ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಪರಿಷತ್ ಚುನಾವಣೆ: ಮಾಸ್ಟರ್ ಟ್ರೈನಿಗಳಿಗೆ ತರಬೇತಿ

ಉಡುಪಿ : ಕರ್ನಾಟಕ ವಿಧಾನ ಪರಿಷತ್ ಗೆ ಡಿ.10 ರಂದು ನಡೆಯುವ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಚುನಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಹೇಳಿದರು.

ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲು ನಿಯೋಜಿಸಿರುವ ಮಾಸ್ಟರ್ ಟ್ರೈನಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಿ. 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಜಿಲ್ಲೆಯ ನಗರ /ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಈ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳು,ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಮತಗಟ್ಟೆ ಸಿಬ್ಬಂದಿಗಳಿಗೆ ಮತದಾನ ಪ್ರಕ್ರಿಯೆಗಳ ಕುರಿತು ಸೂಕ್ತ ತರಬೇತಿ ನೀಡಬೇಕು.ಮತದಾನ ಸಂದರ್ಭದಲ್ಲಿ ಮತಗಟ್ಟೆಯಲ್ಲಿ ಅವರಿಗೆ ಯಾವುದೇ ಗೊಂದಲಗಳು ಉಂಟಾಗದಂತೆ ವಿವರವಾದ ಮಾಹಿತಿಯನ್ನು ನೀಡುವಂತೆ ಮಾಸ್ಟರ್ ಟ್ರೈನಿಗಳಿಗೆ ತಿಳಿಸಿದ ಅಪರ ಜಿಲ್ಲಾಧಿಕಾರಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಒಟ್ಟಾಗಿ,ಯಾವುದೇ ದೂರುಗಳಿಗೆ ಆಸ್ಪದ ನೀಡದ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಜಿಲ್ಲೆಯ ಮಾಸ್ಟರ್ ಟ್ರೈನರ್ ಅಶೋಕ್ ಕಾಮತ್, ಚುನಾವಣಾ ಅಧೀಕ್ಷಕರಾದ ಜಯಲಕ್ಷ್ಮೀ ಮತ್ತು ಸಂಪತ್ ಹಾಗೂ ಜಿಲ್ಲೆಯ 7 ತಾಲೂಕುಗಳ ಮಾಸ್ಟರ್ ಟ್ರೈನರ್ಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/11/2021 09:25 pm

Cinque Terre

1.72 K

Cinque Terre

0

ಸಂಬಂಧಿತ ಸುದ್ದಿ