ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ: ಬೋಟ್ ಹೌಸ್ ನಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ!

ಉಡುಪಿ: ಜಿಲ್ಲೆಯ ಎಲ್ಲ ಮೋರ್ಚಾಗಳು ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ನಿರಂತರ ವೈವಿಧ್ಯಮಯ ಕಾರ್ಯ ಚಟುವಟಿಕೆಗಳಿಂದ ಜಿಲ್ಲೆಯ ಮೋರ್ಚಾಗಳಲ್ಲೇ ಮೂಂಚೂಣಿಯಲ್ಲಿರುವ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಮಲ್ಪೆ ಕಡಲ ತೀರದ ತುದಿಯಲ್ಲಿರುವ ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಂಡಿರುವುದು ರಾಜ್ಯಕ್ಕೇ ಮಾದರಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಉಡುಪಿ-ಮಲ್ಪೆ ಕಡಲ ತೀರದ ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಇಂದು ಸ್ಥಳೀಯಾಡಳಿತ ಸಹಿತ ಹೆಚ್ಚಿನ ಎಲ್ಲಾ ರಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 50ರಷ್ಟು ಮೀಸಲಾತಿ ಇದೆ. ಮಹಿಳಾ ಸಬಲೀಕರಣಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ವಿಶೇಷ ಯೋಜನೆಗಳಿವೆ. ಈ ನಿಟ್ಟಿನಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿ ಅತ್ಯಂತ ಮಹತ್ವ ಹೊಂದಿದೆ ಎಂದು ಕುಯಿಲಾಡಿ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಹಾಗೂ ಮಹಿಳಾ ಮೋರ್ಚಾ ಜಿಲ್ಲಾ ಪ್ರಭಾರಿ ಸುನೀತಾ ಜಗದೀಶ್ ಚಿಕ್ಕಮಗಳೂರು, ಮೀನುಗಾರಿಕಾ ನಿಗಮ ಮಂಗಳೂರು ಇದರ ಸದಸ್ಯೆಯಾಗಿ ನೇಮಕಗೊಂಡಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಎಮ್. ಸುವರ್ಣ, ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈರುವ ಜಿಲ್ಲಾಮಹಿಳಾ ಮೋರ್ಚಾ ಉಪಾಧ್ಯಕ್ಷೆ ರಾಷ್ಟ್ರೀಯ ಈಜು ಪಟು ವಿದ್ಯಾ ಪೈ ಕಾರ್ಕಳ, ಅಕ್ರಮ ಸಕ್ರಮ ಸಮಿತಿ ಹೆಬ್ರಿ ಸದಸ್ಯರಾಗಿ ನೇಮಕಗೊಂಡಿರುವ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್ ಮುನಿಯಾಲು, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯೆಯಾಗಿ ನೇಮಕಗೊಂಡಿರುವ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅಶ್ವಿನಿ ಶೆಟ್ಟಿ ಪಂದುಬೆಟ್ಟು, ಇಂದ್ರಾಣಿ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯೆಯಾಗಿ ನೇಮಕಗೊಂಡಿರುವ ಉಡುಪಿ ನಗರ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುಜಾಲಾ ಸತೀಶ್ ಇಂದ್ರಾಳಿ ಇವರನ್ನು ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.

Edited By : PublicNext Desk
Kshetra Samachara

Kshetra Samachara

09/12/2021 05:24 pm

Cinque Terre

1.05 K

Cinque Terre

0

ಸಂಬಂಧಿತ ಸುದ್ದಿ