ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ಕೊರಗರ ಮೇಲೆ ಪೊಲೀಸ್ ದೌರ್ಜನ್ಯ: ಕಾಂಗ್ರೆಸ್ ನಿಂದ ಪ್ರತಿಭಟನಾ ಮೆರವಣಿಗೆ

ಮಣಿಪಾಲ :ಕೋಟತಟ್ಟು ಗ್ರಾಮದಲ್ಲಿ ನಡೆದ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಯಿತು. ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.ಪ್ರತಿಭಟನಾ ಪಾದಯಾತ್ರೆ ಬಳಿಕ ಜಿಲ್ಲಾಧಿಕಾರಿ ಯರಿಗೆ ಮನವಿ ಸಲ್ಲಿಸಿ ನ್ಯಾಯಯುತ ತನಿಖೆ ನಡೆಸಿ ಕೊರಗ ಸಮುದಾಯದವರಿಗೆ ನ್ಯಾಯ ಒದಗಿಸುವಂತೆ ಅಗ್ರಹಿಸಲಾಯಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಎಲ್ಲ ಅಧ್ಯಕ್ಷರು, ಕೆಪಿಸಿಸಿ ಸಂಯೋಜಕರು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಎಲ್ಲಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರು, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

12/01/2022 03:22 pm

Cinque Terre

2.86 K

Cinque Terre

0

ಸಂಬಂಧಿತ ಸುದ್ದಿ