ಉಡುಪಿ: ಅತ್ಮನಿರ್ಭರ ಅರ್ಥ ವ್ಯವಸ್ಥೆಯ ಕುರಿತು ಇಂದು ನಡೆದ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನೇರ ಪ್ರಸಾರವನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಆಂಡಾರು ದೇವಿಪ್ರಸಾದ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ, ಪಕ್ಷದ ಪ್ರಮುಖರು ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
Kshetra Samachara
02/02/2022 08:24 pm