ಉಡುಪಿ: ದೇಶವಾಸಿಗಳ ನಿರೀಕ್ಷೆಯಂತೆಯೇ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಿದೆ. ಈ ಚುನಾವಣಾ ಫಲಿತಾಂಶವು ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎನಿಸಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಈ ಚುನಾವಣೆಯಲ್ಲಿ ಜನತೆ ವಿರೋಧ ಪಕ್ಷಗಳ ಜಾತಿ ರಾಜಕಾರಣ ಮತ್ತು ಕುಟುಂಬ ರಾಜಕಾರಣವನ್ನು ತಿರಸ್ಕರಿಸಿ, ಅಭಿವೃದ್ಧಿ ಮತ್ತು ಹಿಂದುತ್ವದ ಪರ ಜನಾದೇಶವನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಳೆದ 7 ವರ್ಷಗಳ ಅಭಿವೃದ್ಧಿ ಪರ ಆಡಳಿತ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ರವರ ಜನಪರ ಆಡಳಿತ ವೈಖರಿಯನ್ನು ಮೆಚ್ಚಿ ಜನತೆ ಬಿಜೆಪಿಗೆ ಆಶೀರ್ವದಿಸಿದ್ದಾರೆ. ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ ಮತ್ತು ಗೋವಾ ರಾಜ್ಯಗಳಲ್ಲಿ ಬಿಜೆಪಿ ಸರಕಾರ ರಚಿಸಲಿದ್ದು, ಮಗದೊಮ್ಮೆ ದೇಶಾದ್ಯಂತ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಲಿದೆ.
ಈ ಫಲಿತಾಂಶವು ಪಕ್ಷದ ಕಾರ್ಯಕರ್ತರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮಗದೊಮ್ಮೆ ಕರ್ನಾಟಕದಲ್ಲಿ ಅಭಿವೃದ್ಧಿ ಪರ ಸರಕಾರವನ್ನು ರಚಿಸಲಿದೆ ಎಂದು ಕುಯಿಲಾಡಿ ಹೇಳಿದರು.
Kshetra Samachara
10/03/2022 03:58 pm