ಕುಂದಾಪುರ :ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ ಇಂದು ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ರೂಪಾ ಪೈ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮಹಿಳಾ ಮೋರ್ಚಾದ ಕಾರ್ಯಗಳ ಬಗ್ಗೆ ಅವಲೋಕನ ನಡೆಸಲಾಯಿತು ಹಾಗೂ ಮುಂದಿನ ದಿನಗಳಲ್ಲಿ ಚುನಾವಣಾ ದೃಷ್ಟಿಯಿಂದ ಪಕ್ಷ ಸಂಘಟನೆ ಬಗ್ಗೆ, ಮಹಿಳಾ ಮೋರ್ಚಾದ ಪಾತ್ರದ ಬಗ್ಗೆ ಮತ್ತು ಸರ್ಕಾರದ ವಿವಿಧ ಯೋಜನೆಯನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಕಾರ್ಯವೈಖರಿ ಬಗ್ಗೆ ಹಾಗೂ ಸಮಾಜದಲ್ಲಿ ಮಹಿಳೆಯರು ಉದ್ಯೋಗ ಶೀಲರಾಗುವ ನಿಟ್ಟಿನಲ್ಲಿ ಉದ್ಯೋಗ ಮಾಹಿತಿ ನೀಡುವ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್ ಶೆಟ್ಟಿ, ರಾಜ್ಯ ಆಹಾರ ನಿಗಮ ಮಂಡಳಿ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುರೇಶ್ ಶೆಟ್ಟಿ ಗೋಪಾಡಿ, ಕಾರ್ಯದರ್ಶಿ ಸುರೇಂದ್ರ ಸಂಗಮ್, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಬಾಣ ಮತ್ತು ಮಹಿಳಾ ಮೋರ್ಚಾದ ವಿವಿಧ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅನಿತಾ ಶ್ರೀಧರ್ ಕಾರ್ಯಕ್ರಮ ನಿರೂಪಿಸಿದರು, ಸೌರಭಿ ಪೈ ಮಹಿಳಾ ಮೋರ್ಚಾದ ಕಾರ್ಯವೈಖರಿಯ ವರದಿ ನೀಡಿದರು, ಉಪಾಧ್ಯಕ್ಷೆ ಅಮಿತಾ ರಾಜೇಶ್ ವಂದೇ ಮಾತರಂ ಗೀತೆ ಹಾಡಿದರು.
Kshetra Samachara
07/04/2022 01:46 pm