ಮಣಿಪಾಲ: ವಿವಿಧ ಕಾರ್ಯಕ್ರಮಗಳ ನಿಮಿತ್ತ ಎಪ್ರಿಲ್ 11 ರಂದು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಕಾರ್ಯಕ್ರಮದ ಪೂರ್ವ ತಯಾರಿಯ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಶಾಸಕರಾದ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಪೂರ್ವತಯಾರಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ವೀಣಾ ಬಿ.ಎನ್, ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
08/04/2022 05:50 pm