ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏ.11ರಂದು ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11.45ಕ್ಕೆ ಆದಿ ಉಡುಪಿಗೆ ಹೆಲಿಕಾಪ್ಟರ್ನಲ್ಲಿ ಬಂದಿಳಿಯಲಿರುವ ಸಿಎಂ ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಮಧ್ಯಾಹ್ನ 3ಕ್ಕೆ ಉಡುಪಿಯಲ್ಲಿ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಲಿದ್ದಾರೆ. 3.30ಕ್ಕೆ ಬನ್ನಂಜೆಯಲ್ಲಿ ನಿರ್ಮಾಣವಾಗಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಉದ್ಘಾಟಿಸಲಿದ್ದು, ಸಂಜೆ 5.30ಕ್ಕೆ ಕುಂಜಿಬೆಟ್ಟುವಿನಲ್ಲಿರುವ ಸಗ್ರಿ ಶ್ರೀವಾಸುಕಿ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಸಿಎಂ ಭೇಟಿ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ನಡೆಸಿದ್ದಾರೆ.
Kshetra Samachara
11/04/2022 07:29 am