ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಡಾ. ಬನ್ನಂಜೆ ಗೋವಿಂದಾಚಾರ್ಯ ಜಿಲ್ಲಾ ಕೇಂದ್ರ ಗ್ರಂಥಾಲಯ ಉದ್ಘಾಟಿಸಿದ ಸಿಎಂ

ಉಡುಪಿ: ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡವನ್ನು ಇಂದು ಮುಖ್ಯಮಂತ್ರಿ ಸನ್ಮಾನ್ಯ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಿದರು. ಬಳಿಕ ನಗರ ಕೇಂದ್ರ ಗ್ರಂಥಾಲಯ ಕಟ್ಟಡ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟಿಸಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಪುತ್ಥಳಿ ಅನಾವರಣಗೊಳಿಸಿದರು. ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/04/2022 05:21 pm

Cinque Terre

1.61 K

Cinque Terre

0

ಸಂಬಂಧಿತ ಸುದ್ದಿ