ಉಡುಪಿ: ಇಂದು ಎಲ್ಲಾ ಸ್ತರಗಳಲ್ಲಿ ಮಹಿಳೆಯರಿಗೆ ವಿಶೇಷ ಜವಾಬ್ದಾರಿ ಇದೆ. ಸಮೃದ್ಧ, ಸದೃಢ ಭಾರತ ನಿರ್ಮಾಣದತ್ತ ಪಕ್ಷದ ಸಂಸ್ಥಾಪಕರು ಕಂಡ ಕನಸನ್ನು ನನಸಾಗಿಸುವಲ್ಲಿ ಸಂಘಟಿತ ಶ್ರಮ ಅತ್ಯವಶ್ಯಕ. ಸದೃಢ ಪಕ್ಷ ಸಂಘಟನೆಯಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆಯಲ್ಲಿ ಎ.13ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ. ದೇಶದ ಭದ್ರತೆ ಮತ್ತು ಸಮಗ್ರತೆಗೆ ಒತ್ತು ನೀಡುವ ಜೊತೆಗೆ ಜನಪರ ಆಡಳಿತದ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಅಭಿವೃದ್ಧಿಯ ಶಖೆಯು ನಿರಂತರವಾಗಿ ಮುಂದುವರಿಯಲು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸರಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಜೊತೆಗೆ ಸರಕಾರದ ಉತ್ತಮ ಸಾಧನೆಗಳ ಮೇಲೆ ಬೆಳಕು ಚೆಲ್ಲುವುದು ಇಂದಿನ ಅಗತ್ಯತೆಯಾಗಿದೆ ಎಂದು ಕುಯಿಲಾಡಿ ಹೇಳಿದರು.
Kshetra Samachara
13/04/2022 07:26 pm