ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮೇ 10ರಂದು ಉಡುಪಿಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ

ಉಡುಪಿ : ಇತ್ತೀಚೆಗೆ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾದ್ಯಂತ ಸದೃಢ ಪಕ್ಷ ಸಂಘಟನೆಗೆ ವಿವಿಧ ಕಾರ್ಯಸೂಚಿಗಳನ್ನು ನೀಡಲಾಗಿದೆ. ಮೇ 10ರಂದು ಉಡುಪಿಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಇಂದು ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಜಿಲ್ಲಾ ಪ್ರಕೋಷ್ಠಗಳ ಸಂಕುಲಗಳ ಮತ್ತು ವಿವಿಧ ಕಾರ್ಯಕ್ರಮಗಳ ಉಸ್ತುವಾರಿಗಳ ಯಾದಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು.

ಮೇ 13ರಂದು ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ೧,೦೦೦ಕ್ಕೂ ಮಿಕ್ಕಿ ಪದಾಧಿಕಾರಿಗಳು, ವೃತ್ತಿಪರರು ಮತ್ತು ಕಾರ್ಯಕರ್ತರ ಸಮಾಗಮದೊಂದಿಗೆ ನಡೆಯಲಿದೆ. ಜಿಲ್ಲೆಯಾದ್ಯಂತ ಎಲ್ಲಾ ಮಂಡಲಗಳ ವ್ಯಾಪ್ತಿಯ ಪ್ರತೀ ಮಹಾ ಶಕ್ತಿ ಕೇಂದ್ರಗಳಲ್ಲಿ ಫಲಾನುಭವಿಗಳ ಸಮಾವೇಶವನ್ನು ಆಯೋಜಿಸಲಾಗುವುದು. ಮೇ 30ರಂದು ಮೋದಿ ಸರಕಾರದ ೩ನೇ ಯಶಸ್ವೀ ವರ್ಷಾಚರಣೆ ನಡೆಯಲಿದೆ ಎಂದು ಅವರು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

21/04/2022 02:53 pm

Cinque Terre

1.54 K

Cinque Terre

0

ಸಂಬಂಧಿತ ಸುದ್ದಿ