ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮೋದಿ ಆಡಳಿತದ 8ನೇ ವರ್ಷ: ಸೇವೆ ಮತ್ತು ಬಡವರ ಕಲ್ಯಾಣ ಅಭಿಯಾನದ ಪೂರ್ವಭಾವಿ ಸಭೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಮೇ 30ರಿಂದ ಜೂನ್ 14ರ ವರೆಗೆ ಜಿಲ್ಲೆಯಾದ್ಯಂತ ನಡೆಯಲಿರುವ 'ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ' ಅಭಿಯಾನದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಜಿಲ್ಲಾ ತಂಡದ ಪೂರ್ವಭಾವಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.

ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಅಭಿಯಾನದ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಅಭಿಯಾನದ ಜಿಲ್ಲಾ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಸಹ ಸಂಚಾಲಕ ಸದಾನಂದ ಉಪ್ಪಿನಕುದ್ರು ಹಾಗೂ ಅಭಿಯಾನದ ವಿವಿಧ ಕಾರ್ಯಕ್ರಮಗಳ 17 ವಿಭಾಗಗಳ ಜಿಲ್ಲಾ ಸಂಚಾಲಕರು ಮತ್ತು ಜಿಲ್ಲಾ ಸಹ ಸಂಚಾಲಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/05/2022 08:06 pm

Cinque Terre

1.66 K

Cinque Terre

1

ಸಂಬಂಧಿತ ಸುದ್ದಿ