RSS ಚಡ್ಡಿ ಸುಡಿ ಅಭಿಯಾನಕ್ಕೆ ಕರೆ ಕೊಟ್ಟಿರುವ ಸಿದ್ದರಾಮಯ್ಯ ವಿರುದ್ಧ ಉಡುಪಿಯಲ್ಲಿ ಶಾಸಕ ರಘುಪತಿ ಭಟ್ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯಗೆ RSS ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಿರುವ ಅವರು ,RSS ಚಡ್ಡಿ ಸಂಸ್ಕೃತಿ ಬಿಟ್ಟು ಪ್ಯಾಂಟಿಗೆ ಬಂದು ಬಹಳ ಸಮಯವಾಯಿತು ಎಂದು ವ್ಯಂಗ್ಯವಾಡಿದರು.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ರಘುಪತಿ ಭಟ್, ಸಿದ್ದರಾಮಯ್ಯ ರಾಜಕೀಯ ಕಾರಣಕ್ಕೆ ಹೀಗೆ ಮಾತನಾಡುತ್ತಾರೆ. ಆ ಚಡ್ಡಿ ಇದ್ದದ್ದರಿಂದ ದೇಶದಲ್ಲಿ ಒಳ್ಳೆಯ ವಾತಾವರಣ ಇದೆ. RSS ಇಲ್ಲದೇ ಇರುತ್ತಿದ್ದರೆ ದೇಶದ ಪರಿಸ್ಥಿತಿ ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.
RSS ಸಿದ್ದರಾಮಯ್ಯಗೆ ಏನು ಮಾಡಿದೆಯೋ ಗೊತ್ತಿಲ್ಲ. ದೇಶಭಕ್ತರನ್ನು ತಯಾರು ಮಾಡುವ ಸಂಸ್ಥೆ RSS
ರಾಷ್ಟ್ರೀಯತೆ ಮತ್ತು ಒಳ್ಳೆಯ ಶಿಕ್ಷಣ ಕೊಡುತ್ತಿರುವುದೇ RSS . RSS ಇರುವುದರಿಂದ ಸಿದ್ದರಾಮಯ್ಯರ ಬೇಳೆ ಬೆಳೆಯುತ್ತಿಲ್ಲ.RSS ಏನು ಎಂಬುದು ಇಡೀ ವಿಶ್ವಕ್ಕೇ ಗೊತ್ತು ಎಂದು ತಿರುಗೇಟು ನೀಡಿದರು.
Kshetra Samachara
04/06/2022 06:55 pm