ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪಾಪ್ಯುಲರ್ ಫ್ರಂಟ್ ಖಾತೆ ಕೇಂದ್ರದಿಂದ ಮುಟ್ಟುಗೋಲು ವಿರುದ್ಧ ಪ್ರತಿಭಟನೆ

ಉಡುಪಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬ್ಯಾಂಕ್ ಖಾತೆಗಳನ್ನು ED ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿರುವುದನ್ನು ಖಂಡಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಂಗವಾಗಿ ಪಾಪ್ಯುಲರ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತಮಾಡಿದ ಪಾಪ್ಯುಲರ್ ಫ್ರಂಟ್ ಉಡುಪಿ ಜಿಲ್ಲಾ ಮುಖಂಡ ಹನೀಫ್ ಮೂಳೂರು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ತನ್ನ ರಾಜಕೀಯ ಹಾಗೂ ಸೈದ್ದಾಂತಿಕ ವಿರೋಧಿಗಳನ್ನು ಎದುರಿಸಲು ED, NIA, IT ಯಂತಹ ಸಂಸ್ಥೆಗಳನ್ನು ದುರುಪಯೋಗ ಪಡಿಸುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಪಾಪ್ಯುಲರ್ ಫ್ರಂಟ್ ಉಡುಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಶುಕೂರ್ ಮಲ್ಪೆ ಹಾಗೂ ಇನ್ನಿತರ ನಾಯಕರು ಉಪಸ್ಥಿತರಿದ್ದರು. ತೌಹೀದ್ ಕಾರ್ಯಕ್ರಮ ನಿರೂಪಿಸಿದರು>

Edited By : PublicNext Desk
Kshetra Samachara

Kshetra Samachara

04/06/2022 09:12 pm

Cinque Terre

2.74 K

Cinque Terre

1

ಸಂಬಂಧಿತ ಸುದ್ದಿ