ಪಡುಬಿದ್ರೆ: ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಿಷ್ಠ ಗೂಳಿಸವಲ್ಲಿ ಕಾರ್ಯಕರ್ತರು ಕಾರ್ಯ ಪ್ರವೃತರಾಗಬೇಕು. ಮಹಿಳೆಯರಿಗೆ ಮತ್ತು ಯುವಕರಿಗೆ ಹಚ್ಚಿನ ಅದ್ಯತೆ ನೀಡಿ ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಶ್ರಮವಹಿಸಬೇಕು ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೂರಕೆ ಹೇಳಿದರು.
ಅವರು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಹೆಜಮಾಡಿ ಕಾಂಗ್ರೆಸ್ ಕಚೇರಿಯಲ್ಲಿ ಮುಂಬರುವ ಚುನಾವಣಾ ತಯಾರಿಗಾಗಿ ನಡೆದ ವಿಶೇಷ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ *ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿ ಯಾಗಿ ಅಯ್ಕೆಗೊಂಡ ಮಹಮ್ಮದ್ ಝಿಯಾನ್ ಗೆ ಅಭಿನಂದಿಸಿ ಗೌರವಿಸಲಾಯಿತು.. ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ , ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ಅಹಮ್ಮದ್, ಮಾಜಿ.ಜಿ.ಪಂ ಸದಸ್ಯ ರಾಲ್ಫಿ ಡಿ ಕೂಸ್ತಾ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
06/06/2022 01:01 pm