ಕುಂದಾಪುರ : ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಂ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು, ಜಿಲ್ಲೆಗೆ ಆಗಮಿಸಿದ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಅಂತರಾಷ್ಟ್ರೀಯ ಕ್ರೀಡಾಪಟು ಕುಂದಾಪುರ ನ್ಯೂ ಹರ್ಕ್ಯುಲೆಸ್ ಜಿಮ್ ನ ವ್ಯವಸ್ಥಾಪಕ ಸತೀಶ್ ಖಾರ್ವಿ, ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ, ರಾಜೇಶ್ ಕಾವೇರಿ, ಕುಸುಮಾಕರ್, ಅಶೋಕ್ ಜಿ ವಿ, ಹುಸೇನ್ ಹೈಕಾಡಿ ಎಲ್ಲರೂ ಸೇರಿ ಗುರುರಾಜ್ ಪೂಜಾರಿಯವರನ್ನು ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಗುರುರಾಜ ಪೂಜಾರಿ, ಈ ಬಾರಿಯ ಕಾಮನ್ ವೆಲ್ತ್ ಸ್ಪರ್ಧೆಯಲ್ಲಿ ಭಾಗವಹಿಸಿ ತೀವ್ರ ಪೈಪೋಟಿಯ ನಡುವೆಯೂ ಕಂಚಿನ ಪದಕ ಗೆದ್ದು ವೈಟ್ ಲಿಫ್ಟಿಂಗ್ ನ 61 ಕೆಜಿ ವಿಭಾಗದಲ್ಲಿ ದೇಶಕ್ಕೆ ಇದೇ ಮೊದಲ ಬಾರಿಗೆ ಪದಕ ದೊರಕಿಸಿಕೊಟ್ಟು ಇತಿಹಾಸ ಸೃಷ್ಟಿಸಲು ಸಾಧ್ಯವಾಯಿತು.
ನನ್ನ ಈ ಸಾಧನೆಗೆ ಪ್ರೋತ್ಸಾಹ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಕ್ರೀಡಾಪಟುಗಳು ನಿರ್ದಿಷ್ಟ ಗುರಿಯೊಂದಿಗೆ ಕಠಿಣ ಪರಿಶ್ರಮ ಪಟ್ಟರೆ ಉನ್ನತ ಸಾಧನೆಗಳನ್ನು ಮಾಡಲು ಸಾಧ್ಯ ಎಂದರು.
ನಾನು ಕುಂದಾಪುರದ ಒಂದು ಗ್ರಾಮೀಣ ಪ್ರದೇಶದಿಂದ ಹೋಗಿ ಕಾಮನ್ ವೆಲ್ತ್ ಎನ್ನುವ ದೊಡ್ಡ ಒಂದು ಕ್ರೀಡಾಂಗಣದಲ್ಲಿ ಭಾಗವಹಿಸಿ ಗೆದ್ದು ಮೆಡಲ್ ತರುವುದು ಅಷ್ಟು ಸುಲಭದ ಕೆಲಸವಲ್ಲ. ನಾನು ಇಂದು ಅಂತಹ ಒಂದು ಸಾಧನೆಯನ್ನು ಮಾಡಿದ್ದೇನೆ ಎಂದರೆ ಅದಕ್ಕೆ ಕುಂದಾಪುರ ನ್ಯೂ ಹರ್ಕ್ಯುಲೆಸ್ ಜಿಮ್ ನ ವ್ಯವಸ್ಥಾಪಕ ಸತೀಶ್ ಖಾರ್ವಿಯವರು ನನಗೆ ಸ್ಫೂರ್ತಿಯಾಗಿದ್ದಾರೆ. ಅವರ ಒಂದು ಸಹಕಾರದಿಂದ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ ಅದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.
Kshetra Samachara
07/08/2022 08:43 pm