ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ ವಂಚನೆ.

ಬೈಂದೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವರಿ ಗೆ 10 ಲಕ್ಷ ರೂ. ವಂಚಿಸಿರುವ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದಲ್ಲಿ ನಡೆದಿದೆ.

ತ್ರಾಸಿ ಗ್ರಾಮ ನಿವಾಸಿ ರೆಹಾನ್‌ ಅಹ್ಮದ್‌ ಅವರಿಗೆ ಲತೇಶ್‌ ಸಂಜೀವ್‌ ಕುಂಬ್ಲೆ ಎಂಬ ವ್ಯಕ್ತಿ ವಂಚಿಸಿದ್ದಾನೆ. ಈತ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ವಂಚಿಸಿದ್ದು, ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಲತೇಶ್ ತನಗೆ ದೊಡ್ಡ ದೊಡ್ಡ ರಾಜಕಾರಣಿಗಳ ಪರಿಚಯವಿರುವುದಾಗಿ ರೆಹಾನ್‌ ಅವರನ್ನು ನಂಬಿಸಿದ್ದಾನೆ. ಬಳಿಕ ರೆಹಾನ್‌ ಅವರ ಅಕ್ಕ ಸಬೀನಾ ಅಖ್ತರ್‌ ಅವರಿಗೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ 10 ಲಕ್ಷ ರೂ. ಹಣ ಪಡೆದಿದ್ದನು.

ಈ ಬಗ್ಗೆ ಕುಂದಾಪುರ ನ್ಯಾಯಾಲಯದಲ್ಲಿ ದಾಖಲಾದ ಖಾಸಗಿ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

08/08/2022 05:46 pm

Cinque Terre

1.39 K

Cinque Terre

0

ಸಂಬಂಧಿತ ಸುದ್ದಿ