ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ- ತುಳು, ಸಂಸ್ಕೃತ ಪ್ರತ್ಯಕ್ಷ

ಉಡುಪಿ: ಕೇಂದ್ರ ಸರ್ಕಾರವು ರಾಜ್ಯದ ಮೇಲೆ ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪದ ನಡುವೆಯೇ ಉಡುಪಿ ಕೃಷ್ಣಮಠದ ಫಲಕದಲ್ಲಿ ಕನ್ನಡ ಮಾಯವಾಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಶ್ರೀಕೃಷ್ಣಮಠದ ಮಹಾದ್ವಾರದ ಮೇಲೆ ಕನ್ನಡದಲ್ಲಿ ಕೃಷ್ಣಮಠ ಎಂಬ ದೊಡ್ಡ ಫಲಕವನ್ನು ಹಾಕಲಾಗಿತ್ತು. ಆದರೆ ಮಠವನ್ನು ನವೀಕರಿಸಿದ ಬಳಿಕ ಹಾಕದ ಹೊಸ ಫಲಕದಲ್ಲಿ ಕನ್ನಡದ ಬದಲು ತುಳು ಮತ್ತು ಸಂಸ್ಕೃತದಲ್ಲಿ ಶ್ರೀಕೃಷ್ಣಮಠ ಎಂದು ಬರೆಯಲಾಗಿದೆ. ಶ್ರೀಕೃಷ್ಣಮಠ ರಜತಪೀಠ ಪುರ ಎಂದು ತುಳುವಿನಲ್ಲೂ, ಶ್ರೀಕೃಷ್ಣಮಠ ರಜತಪೀಠ ಪುರಂ ಎಂದು ಸಂಸ್ಕೃತದಲ್ಲಿ ಬರೆಯಲಾಗಿದೆ.

ಈ ಬಗ್ಗೆ ಕನ್ನಡ ಅಭಿಮಾನಿಗಳು ಹಾಗೂ ಮಠದ ಕೆಲ ಭಕ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ ಕೃಷ್ಣಮಠದಲ್ಲಿ ಕನ್ನಡಕ್ಕೆ ಕಿಮ್ಮತ್ತು ಇಲ್ಲವೇ ಎಂದು ಪ್ರಶ್ನಿಸಿ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಮಠದ ಆಡಳಿತ ಮಂಡಳಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Edited By : Vijay Kumar
Kshetra Samachara

Kshetra Samachara

01/12/2020 11:23 pm

Cinque Terre

7.57 K

Cinque Terre

2

ಸಂಬಂಧಿತ ಸುದ್ದಿ