ಉಡುಪಿ: ಶ್ರೀ ವೆಂಕಟರಮಣ ದೇವಸ್ಥಾನ ಕರಂಬಳ್ಳಿ ಕುಂಜಿಬೆಟ್ಟು ಉಡುಪಿ ಇಲ್ಲಿ ದಿನಾಂಕ 11-01-2021 ರಿಂದ ದಿನಾಂಕ 19-01-2021 ರ ವರೆಗೆ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವರಿಗೆ, ಶ್ರೀ ಈಶ್ವರ, ಶ್ರೀ ಗಣಪತಿ ಮತ್ತು ಮುಖ್ಯಪ್ರಾಣ ದೇವರಿಗೆ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ, ಮಹಾ ಅನ್ನಸಂತರ್ಪಣೆ ನಡೆಯಲಿದೆ.
ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿಕ್ಕಮಗಳೂರು ಶಾಸಕರಾದ ಸಿ.ಟಿ ರವಿ ಅವರು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ ಮತ್ತು ರಮೇಶ್ ಬಾರಿತ್ತಾಯ, ಎಸ್. ವಿ ಭಟ್ ಹಾಗೂ ದೇವಸ್ಥಾನದ ಅರ್ಚಕರು ಉಪಸ್ಥಿತರಿದ್ದರು.
Kshetra Samachara
13/01/2021 04:08 pm