ಕೊಲ್ಲೂರು :ಕನ್ನಡ ಸಂಸ್ಕೃತಿ ಮತ್ತು ಇಂಧನ ಸಚಿವ ಸುನೀಲ್ ಕುಮಾರ್ ಅವರಿಂದು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರಿಗೆ ವ್ಯವಸ್ಥಾಪನ ಸಮಿತಿಯಿಂದ ಸ್ವಾಗತ ಕೋರಲಾಯಿತು.
ಬಳಿಕ ಸಚಿವರು ದೇವಿಯ ದರ್ಶನ ಮಾಡಿ ಪೂಜೆ ನೆರವೇರಿಸಿದರು. ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಸ್ಥಳವಾಗಿರುವ ಕೊಲ್ಲೂರು ದೇವಸ್ಥಾನಕ್ಕೆ ಸುನಿಲ್ ಕುಮಾರ್ ಸಚಿವರಾದ ಬಳಿಕ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.ಇವತ್ತು ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಸಚಿವರು ,ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Kshetra Samachara
30/08/2021 11:38 am