ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪುಂದದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ

ಬೈಂದೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಹಾಗೂ ಸರಕಾರಿ ಪ್ರೌಢಶಾಲೆ ಉಪ್ಪುಂದ ಇವರ ಆಶ್ರಯದಲ್ಲಿ ಪ್ರೌಢ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಬುಧವಾರ ಉಪ್ಪುಂದ ಪ್ರೌಢಶಾಲಾ ಮೈದಾನದಲ್ಲಿ ನಡೆಯಿತು.

ಸದಾಶಿವ ಗಾಣಿಗ ಉಪ್ಪುಂದ ದೀಪ ಬೆಳಗಿಸಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿದರು. ಸಭಾ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಿ ಖಾರ್ವಿ ವಹಿಸಿದ್ದರು. ಒಟ್ಟು 20 ತಂಡಗಳು ಭಾಗವಹಿಸಿದ್ದು, ಈ ಪೈಕಿ ಇಲ್ಲಿ ವಿಜೇತ ತಂಡಗಳು ಮುಂದೆ ಮೈಸೂರು ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಲಿದೆ. ಶಿಕ್ಷಕ ಕೇಶವ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿ, ಸತೀಶ್ ಶೆಟ್ಟಿ ವಂದಿಸಿದರು.

Edited By : PublicNext Desk
Kshetra Samachara

Kshetra Samachara

14/09/2022 02:44 pm

Cinque Terre

1.48 K

Cinque Terre

0

ಸಂಬಂಧಿತ ಸುದ್ದಿ