ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪುಂದದಲ್ಲಿ ಬೈಂದೂರು ತಾಲೂಕು ಮಟ್ಟದ ಪ.ಪೂ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

ಉಪ್ಪುಂದ : ಕ್ರೀಡೆಯಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ ಸಾಧ್ಯ. ಕ್ರೀಡೆಗಳು ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಉದ್ಯಮಿ ಶರತ್ ಕುಮಾರ್ ಶೆಟ್ಟಿ ಉಪ್ಪುಂದ ಹೇಳಿದರು.

ಅವರು ಉಪ್ಪುಂದ ಜ್ಯೂನಿಯರ್ ಕಾಲೇಜಿನಲ್ಲಿ ಮಂಗಳವಾರ ಪದವಿಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕರು, ಪ.ಪೂ.ಶಿ.ಇಲಾಖೆ ಉಡುಪಿ, ಹಾಗೂ ಸರ್ಕಾರೀ ಪದವಿ ಪೂರ್ವ ಕಾಲೇಜು, ಉಪ್ಪುಂದ ಇವರ ಸಹಯೋಗದಲ್ಲಿ ನಡೆದ ಬೈಂದೂರು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿ ಬೆಂಗಳೂರಿನ ಯುವ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ನಿತಿನ್ ನಾರಾಯಣ್ ಮಾತನಾಡಿ, ಗ್ರಾಮಿಣ ಭಾಗದ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಕ್ರೀಡೋತ್ಸವಗಳು ಮಹತ್ತರವಾದ ಪಾತ್ರವಹಿಸುತ್ತವೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಅಂತರ್ರಾಷ್ಟ್ರೀಯ ಮಟ್ಟದ ವರೆಗೂ ನಿಮ್ಮ ಪ್ರತಿಭೆ ಮಿಂಚಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ ಶೆಟ್ಟಿ, ಸದಸ್ಯರಾದ ಶೇಖರ ಪೂಜಾರಿ, ಪ್ರಕಾಶ್ ಆಚಾರ್ಯ, ಮಂಜಮ್ಮ, ಮಾಜೀ ತಾ.ಪಂ ಸದಸ್ಯೆ ಪ್ರಮೀಳಾ ದೇವಾಡಿಗ, ಉಪ ಪ್ರಾಂಶುಪಾಲ ಜಿ. ಸತ್ಯನಾರಾಯಣ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಯು. ಪ್ರಕಾಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು. ಪ್ರಾಂಶುಪಾಲ ಯಾದವ್ ವಿ ಕರ್ಕೇರ ಸ್ವಾಗತಿಸಿದರು ವಿದ್ಯಾರ್ಥಿನಿ ರಕ್ಷಿತಾ ಹೆಚ್ ವಂದಿಸಿದರು. ಉಪನ್ಯಾಸಕ ಸುಜನ್ ಕುಮಾರ್ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

20/09/2022 01:19 pm

Cinque Terre

1.95 K

Cinque Terre

0

ಸಂಬಂಧಿತ ಸುದ್ದಿ