ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ರೀಡಾಕೂಟದಿಂದ ಮಕ್ಕಳ ಏಳಿಗೆ ಸಾಧ್ಯ -ಜಿ.ಪಂ.ಅಧ್ಯಕ್ಷ ದಿನಕರ ಬಾಬು ಹೇಳಿಕೆ

ಉಡುಪಿ:ಕ್ರೀಡಾ ಪಟುಗಳಿಗೆ ಹಾಗೂ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾಡ್ಮಿಂಟನ್ ಪಂದ್ಯಾಕೂಟವನ್ನು ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದು, ಮುಂದೆ ಜಿಲ್ಲೆಯ ಇತರೆ ತಾಲೂಕುಗಳಲ್ಲಿಯೂ ಕೂಡ ಪಂದ್ಯಾಕೂಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ತಿಳಿಸಿದರು.

ಅವರು ಶನಿವಾರ, ಅಜ್ಜರಕಾಡು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಹಾಗೂ ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಪ್ರತಿಭೆಗಳನ್ನು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಲು ಕ್ರೀಡಾಕೂಟಗಳು ಅಗತ್ಯವಾಗಿದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಮಕ್ಕಳ ಏಳಿಗೆಗಾಗಿ ಕ್ರೀಡಾಕೂಟ ಅಗತ್ಯವಾಗಿದ್ದು, ಮಕ್ಕಳು ಇದರಿಂದ ಮತ್ತಷ್ಟು ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ.

ಕ್ರೀಡಾಕೂಟಗಳಿಂದ ತಾಳ್ಮೆ ಹಾಗೂ ಏಕಾಗ್ರತೆ ಹೊಂದುವುದರಿAದ ಬಿಡುವಿನ ವೇಳೆಯಲ್ಲಿಯೂ ವಿವಿಧ ರೀತಿಯ ಕ್ರೀಡಾಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಅಜ್ಜರಕಾಡು ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

Edited By : Nagaraj Tulugeri
Kshetra Samachara

Kshetra Samachara

30/01/2021 10:40 pm

Cinque Terre

3.53 K

Cinque Terre

1

ಸಂಬಂಧಿತ ಸುದ್ದಿ