ಉಡುಪಿ: ದಿನಾಂಕ 30 ಮೇ 22 ರಿಂದ 1 ಜೂನ್ 22 ರ ವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯ ಪರವಾಗಿ ಭಾಗವಹಿಸಿದ ಅಶ್ವಿನ್ ಸನಿಲ್ ಕುರ್ಕಾಲು, ಇವರು ಪವರ್ ಲಿಫ್ಟಿಂಗ್, ಮತ್ತು ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕ ಹಾಗೂ 100 ಮೀಟರ್ ಓಟದಲ್ಲಿ ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಉಡುಪಿ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಪ್ರಸ್ತುತ ಕಾರ್ತಿಕ್ ಪೂಜಾರಿ ಹಾಗೂ ಅಬ್ಬಾಸ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.
Kshetra Samachara
04/06/2022 08:52 pm