ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಟೇಬಲ್ ಟೆನಿಸ್ ನಲ್ಲಿ ಪ್ರೌಡ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಕುಂದಾಪುರ : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು, ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಮತ್ತು ಸೈಂಟ್ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆ ಕಲ್ಯಾಣಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜನೆಗೊಂಡ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿ.ಕೆ.ಆರ್. ಪ್ರೌಢಶಾಲೆಯ ತರಗತಿಯ ವಿದ್ಯಾರ್ಥಿಗಳಾದ ಕ್ಷಮಾ, ಭಾರ್ಗವಿ, ಸನಿಹಾ, ಅಂಕಿತಾ 17 ರ ವಯೋಮಾನದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಅಲಂಕರಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಸಂಸ್ಥೆಗೆ ಹೆಮ್ಮೆ ತಂದಿರುತ್ತಾರೆ.

ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್ ಅವರ ಮಾರ್ಗದರ್ಶನ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ಶೆಟ್ಟಿಯವರಿಂದ ಪ್ರೇರಣೆ ಮತ್ತು ಶಿಸ್ತುಬದ್ಧ ತರಬೇತಿಯನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿಯವರು ಅಭಿನಂದಿಸಿದರು.

Edited By : PublicNext Desk
Kshetra Samachara

Kshetra Samachara

24/08/2022 02:11 pm

Cinque Terre

892

Cinque Terre

0

ಸಂಬಂಧಿತ ಸುದ್ದಿ