ಬೈಂದೂರು: ತಾಲೂಕಿನ ಮರವಂತೆ ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಕೊಡಮಾಡಿದ ಶುದ್ಧ ನೀರಿನ ಘಟಕವನ್ನು ಎಸ್. ಜನಾರ್ಧನ ಮರವಂತೆ ಉದ್ಘಾಟನೆ ಮಾಡಿದರು.
ಇದೆ ಸಂದರ್ಭದಲ್ಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬುರವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕಾರದ ನಂತರ ಮಾತನಾಡಿದ ಡಾ. ಗೋವಿಂದ ಬಾಬು ಪೂಜಾರಿ ಶಾಲೆಗಳ ಅಭಿವೃದ್ಧಿಗಾಗಿ ಸ್ಥಳೀಯ ಸಹಕಾರ ಅಗತ್ಯವಾಗಿರುತ್ತೆ, ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮೌಲ್ಯಧಾರಿತ ಶಿಕ್ಷಣ ಸಿಗುತ್ತೆ ಎಂದರು.ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಸತ್ಯ ನಾರಾಯಣ ಕೊಡೇರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಅನಿತಾ ಆರ್. ಕೆ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಿಕ್ಷಕ ವೃಂದ ಇನ್ನಿತರರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Kshetra Samachara
06/04/2022 08:41 am