ಕಾರವಾರ (ಉತ್ತರಕನ್ನಡ): ಗ್ರ್ಯಾನೈಟ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ನಡೆದಿದೆ.
ಯಲ್ಲಾಪುರ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಲಾರಿ, ಆಳವಾದ ಕಂದಕಕ್ಕೆ ಉರುಳಿದೆ. ಪಲ್ಟಿಯಾದ ರಭಸಕ್ಕೆ ಲಾರಿ ಸಂಪೂರ್ಣ ಛಿದ್ರವಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಯಲ್ಲಾಪುರ ಪೊಲೀಸರು, ಮೃತದೇಹವನ್ನು ಹೊರ ತೆಗೆಯುತ್ತಿದ್ದಾರೆ. ಚಾಲಕ ಹಾಗೂ ಕ್ಲೀನರ್ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ.
PublicNext
17/09/2022 04:28 pm