ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟ್ಯಾಂಕರ್ ಪಲ್ಟಿ, ಪೆಟ್ರೋಲ್ ಸೋರಿಕೆ; ರಕ್ಷಣಾ ತಂಡಗಳ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ!

ಕಾರವಾರ (ಉತ್ತರಕನ್ನಡ): ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಮಂಗಳೂರಿನಿಂದ ಬೀದರ್ ಕಡೆಗೆ ಪೆಟ್ರೋಲ್ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಉರುಳಿಬಿದ್ದ ಪರಿಣಾಮ ಪೆಟ್ರೋಲ್ ತುಂಬಿದ್ದ ಟ್ಯಾಂಕ್‌ಗೆ ಹಾನಿಯಾಗಿದ್ದು, ಪೆಟ್ರೋಲ್ ಸೋರಿಕೆಯಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ, ತಕ್ಷಣ ಪೆಟ್ರೋಲ್ ಸೋರಿಕೆ ತಡೆದು ಟ್ಯಾಂಕರ್ ಮೇಲೆತ್ತಿದ್ದಾರೆ.

ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬಹುದೊಡ್ಡ ದುರಂತ ತಪ್ಪಿದಂತಾಗಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

29/09/2022 02:23 pm

Cinque Terre

9.54 K

Cinque Terre

0

ಸಂಬಂಧಿತ ಸುದ್ದಿ