ಟೆಂಪೋ ಮತ್ತು ಐರಾವತ ಬಸ್ ನಡುವೆ ಅಪಘಾತ ಸಂಭವಿಸಿ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಟ್ಕಳ ತಾಲೂಕಿನ ತೆರ್ನಮಕ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್, ಟೆಂಪೋಗೆ ಹಿಂದಿನಿಂದ ಡಿಕ್ಕಿಯಾಗಿದೆ. ಬಸ್ಸಿನ ಮುಂಬದಿ ಸೀಟ್‌ನಲ್ಲಿ ಕುಳಿತ ಪ್ರಯಾಣಿಸುತ್ತಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ.
ಬಸ್ ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಡಿಕ್ಕಿಯ ರಭಸಕ್ಕೆ ಬಸ್ಸಿನ ಎಡ ಬದಿ ಭಾರೀ ಹಾನಿಯಾಗಿದೆ.
ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಅಪಘಾತ ಕುರಿತು ಪ್ರಕರಣ ದಾಖಲಾಗಿದೆ.
PublicNext
01/10/2022 02:21 pm