ಕಾರವಾರ (ಉತ್ತರ ಕನ್ನಡ): ಕಾರ್ಮಿಕರ ವಸತಿ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟಗೊಂಡು ಐದಕ್ಕೂ ಅಧಿಕ ಕಾರ್ಮಿಕರ ಶೆಡ್‌ಗಳು ಸುಟ್ಟು ಭಸ್ಮಗೊಂಡ ಘಟನೆ ಕಾರವಾರ ತಾಲೂಕಿನ ಮುದಗಾ ಲೇಬರ್ ಕಾಲೋನಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.
ನೌಕಾನೆಲೆಯ ಕಟ್ಟಡ ಕಾಮಗಾರಿಗೆ ಒರಿಶಾ ಸೇರಿದಂತೆ ಹೊರರಾಜ್ಯದಿಂದ ನೂರಕ್ಕೂ ಅಧಿಕ ಕಾರ್ಮಿಕರು ಈ ಕಾಲೋನಿಯಲ್ಲಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದು, ಈ ಶೆಡ್‌ಗಳಲ್ಲಿನ ಒಂದು ದೊಡ್ಡ ಸಿಲಿಂಡರ್, ಎರಡು ಸಣ್ಣ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಶೆಡ್‌ನಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, 25ಕ್ಕೂ ಅಧಿಕ ಕಾರ್ಮಿಕರ ಮೊಬೈಲ್‌ಗಳು ಬೆಂಕಿಗಾಹುತಿಯಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
PublicNext
12/10/2022 11:16 am