ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ : ಪೋಕ್ಸೋ ಆರೋಪಿ ಆತ್ಮಹತ್ಯೆ!

ಭಟ್ಕಳ : ಪೋಕ್ಸೋ ಆರೋಪಿಯೋರ್ವ ಮನೆಯ ಹಿಂಬದಿಯ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳ ತಾಲ್ಲೂಕಿನ ಹಡೀನ್ ಸಬ್ಬತ್ತಿಯಲ್ಲಿ ನಡೆದಿದೆ.

ನಾರಾಯಣ ನಾಯ್ಕ (64) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತನ ಮೇಲೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Abhishek Kamoji
Kshetra Samachara

Kshetra Samachara

13/10/2022 05:58 pm

Cinque Terre

21.2 K

Cinque Terre

0

ಸಂಬಂಧಿತ ಸುದ್ದಿ