ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಬೀದಿ ಬದಿ ವ್ಯಾಪಾರಕ್ಕೆ ಅನುವು ಮಾಡಿಕೊಡಲು ಮಾಜಿ ಶಾಸಕರ ಒತ್ತಾಯ

ಕಾರವಾರ (ಉತ್ತರಕನ್ನಡ): ನಗರದಲ್ಲಿ ಹಲವು ವರ್ಷಗಳಿಂದ ತರಕಾರಿ ಮಾರಾಟ ಮಾಡುತ್ತಿರುವ ಗ್ರಾಮೀಣ ಭಾಗದ ಮಹಿಳೆಯರಿಗೆ ಫುಟ್ ಪಾತ್ ಮೇಲೆ ವ್ಯಾಪಾರ ಮಾಡಲು ಅನುವು ಮಾಡಿಕೊಡುವಂತೆ ಮಾಜಿ ಶಾಸಕ ಸತೀಶ್ ಸೈಲ್ ನಗರಸಭೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಹೂವು ಹಣ್ಣು ಮಾರುಕಟ್ಟೆಗೆ ಬೀದಿ ಬದಿ ವ್ಯಾಪರಸ್ಥರನ್ನ ಸ್ಥಳಾಂತರ ಮಾಡಲಾಗಿತ್ತು. ಈ ಹಿಂದೆಯೇ ಸ್ಥಳಾಂತರ ಮಾಡಿದ್ದರು, ಗಣಪತಿ ಹಬ್ಬ ಹಿನ್ನಲೆಯಲ್ಲಿ ಬೀದಿ ಬದಿಯಲ್ಲಿಯೇ ಮಾರಾಟ ಮಾಡಲು ಅನುವು ಮಾಡಿಕೊಡುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಕೆಲಕಾಲ ವಿನಾಯಿತಿ ನೀಡಿದ್ದ ನಗರಸಭೆ ಅಧಿಕಾರಿಗಳು, ಸೋಮವಾರ ಎಲ್ಲರನ್ನ ಹೊಸ ಮಾರುಕಟ್ಟೆಗೆ ಸ್ಥಳಾಂತರ ಮಾಡಿದ್ದರು.

ಇದೇ ವೇಳೆ ನಗರದಲ್ಲಿ ಹಲವು ವರ್ಷಗಳಿಂದ ತರಕಾರಿ ಮಾರಾಟ ಮಾಡುತ್ತಿದ್ದ ಗ್ರಾಮೀಣ ಭಾಗದ ಮಹಿಳೆಯರನ್ನ ಕೂಡ ಸ್ಥಳಾಂತರ ಮಾಡಿದ ಹಿನ್ನೆಲೆಯಲ್ಲಿ ಸತೀಶ್ ಸೈಲ್ ವ್ಯಾಪಾರಸ್ಥರೊಂದಿಗೆ ನಗರಸಭೆಗೆ ಭೇಟಿ ನೀಡಿ, ಪೌರಾಯುಕ್ತರು ಹಾಗೂ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.

Edited By : Shivu K
Kshetra Samachara

Kshetra Samachara

21/09/2022 11:04 am

Cinque Terre

1.9 K

Cinque Terre

0