ಮುಂಡಗೋಡ: ದನ ಮೇಯಿಸಲು ಕಾಡಿಗೆ ಹೋಗಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ತಾಲೂಕಿನ ಧುಂಡಶಿ ಸರಹದ್ದಿನ ಮುಂಡಗೋಡು ನ್ಯಾಸರ್ಗಿ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ನ್ಯಾಸರ್ಗಿ ಗೌಳಿ ದಡ್ಡಿ ಗ್ರಾಮದ ರಾಮು ಎಡಗೆ ಎಂದು ಗುರುತಿಸಲಾಗಿದೆ. ಎಂದಿನಂತೆ ದನ ಮೇಯಿಸಲು ಅರಣ್ಯ ಪ್ರದೇಶಕ್ಕೆ ಹೋದಾಗ ಮರಿ ಯೊಂದಿಗೆ ಆಗಮಿಸಿದ ಕರಡಿಯೊಂದು ಏಕಾಏಕಿ ದಾಳಿ ನಡೆಸಿ ಕೈ, ಕಾಲು, ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಗಾಯಾಳುವಿಗೆ ಮುಂಡಗೋಡ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ.
Kshetra Samachara
19/10/2020 10:50 pm