ಭಟ್ಕಳ: ತಾಲೂಕಿನ ಶಿರಾಲಿ ನೀಲಕಂಠದ ಹುಲ್ಲುಕ್ಕಿಯಲ್ಲಿ ಈಜಲು ತೆರಳಿದ ವೇಳೆ ಮುಸ್ಲಿಂ ಯುವಕನೊರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತನ್ನ ಸ್ನೇಹಿತರೊಂದಿಗೆ ಪಾಳು ಬಿದ್ದ ಶಿಲೆ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ ವೇಳೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮೃತ ಯುವಕ ಜುಬೇರ್ ಇರ್ಶಾದ್ ಅಲಿಅಕ್ಬರ್(17)ವರ್ಷ ಕಾರಗದ್ದೆ ನಿವಾಸಿ ಎಂದು ತಿಳಿದು ಬಂದಿದೆ. ಈತ ಹಲವಾರು ವರ್ಷಗಳಿಂದ ಪಾಳು ಬಿದ್ದ ಶಿಲೆ ಕಲ್ಲು ಕ್ವಾರಿಯಲ್ಲಿ ಸ್ನೇಹಿತರ ಜೊತೆ ಈಜಲು ತೆರಳಿದಾಗ ಈ ಘಟನೆ ನಡೆದಿದೆ.
ಶುಕ್ರವಾರದ ರಜೆಯ ದಿನವನ್ನು ಕಳೆಯಲು ತನ್ನ ಸ್ನೇಹಿತರೊಂದಿಗೆ ಅನೇಕ ವರ್ಷದಿಂದ ಶಿಲೆ ಕಲ್ಲು ಕ್ವಾರಿ ನಡೆಸಿ ಸದ್ಯ ಖಾಲಿ ಇರುವ ಈ ಸ್ಥಳದಲ್ಲಿ ಮಳೆ ನೀರು ತುಂಬಿ ಹೊಳೆಯಂತಾಗಿದ್ದ ಜಾಗಕ್ಕೆ ಈಜಲು ತೆರಳಿದ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಯುವಕ ನೀರಿನಲ್ಲಿ ಮುಳುಗಿರುವ ವಿಷಯ ತಿಳಿದು ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸ್ಥಳಕ್ಕೆ ಬಂದು ಮೃತ ದೇಹ ಪತ್ತೆ ಹಚ್ಚಲು ಸಹಕರಿಸಿದರು. ಅಂತಿಮವಾಗಿ ಸಾವನ್ನಪ್ಪಿದ ಯುವಕನ ಮೃತ ದೇಹ ಪತ್ತೆ ಹಚ್ಚುವಲ್ಲಿ ಭಟ್ಕಳದ ಅಗ್ನಿಶಾಮಕ ಠಾಣೆ ಅಧಿಕಾರಿ ರಮೇಶ್ ನೇತೃತ್ವದ ಸಿಬಂದಿ ತಂಡ ಮತ್ತು ಅಲ್ಲಿನ ಸ್ಥಳೀಯ ಯುವಕರು ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ತಹಶೀಲ್ದಾರ್ ಡಾ. ಸುಮಂತ ಬಿ, ಭಟ್ಕಳ ಗ್ರಾಮೀಣ ಠಾಣೆ ಸಿ.ಪಿ.ಐ ಮಾಹಾಬಲೇಶ್ವರ ನಾಯ್ಕ, ಪಿ.ಎಸ್.ಐ ಭರತ್ ನಾಯಕ, ಭಟ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಠಾಣಾಧಿಕಾರಿ ರಮೇಶ್ , ಎಸ್.ಡಿ.ಆರ್.ಆಫ್ ತಂಡ ಹಾಗೂ ಮಾವಳ್ಳಿ ಕಂದಾಯ ನಿರೀಕ್ಷಕರಾದ ಶ್ರೀನಿವಾಸ ಮಾಸ್ತಿ, ಮುಂತಾದವರು ಇದ್ದರು.
Kshetra Samachara
10/09/2022 03:31 pm