ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ಯಾಂಕ್ ಆಫ್ ಬರೋಡಾದಲ್ಲಿ ವಂಚನೆ: ಪತ್ನಿ ಹೆಸರಿಗೆ 2.69 ಕೋಟಿ ರೂ. ವರ್ಗಾಯಿಸಿಕೊಂಡ ಅಧಿಕಾರಿ, ಖಾತೆದಾರರಲ್ಲಿ ಆತಂಕ!!

ಕಾರವಾರ: ಯಲ್ಲಾಪುರ ಪಟ್ಟಣದಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ 2.69 ಕೋಟಿ ರೂ. ಹಣ ವರ್ಗಾವಣೆ ಮಾಡಿಸಿಕೊಂಡು ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.

ಬ್ಯಾಂಕ್ ಆಫ್ ಬರೋಡಾ ಯಲ್ಲಾಪುರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿದ್ದ, ಆಂಧ್ರಪ್ರದೇಶ ಮೂಲದ ಕುಮಾರ ಬೋನಾಲ ಎಂಬಾತ ಕಳೆದ ಏಪ್ರಿಲ್ 7ರಿಂದ ಸೆಪ್ಟೆಂಬರ್ 5ರ ನಡುವೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ. ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಅನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು, ಆಂಧ್ರದ ಚಿರಲಾದ ಎಸ್ಬಿಐನಲ್ಲಿ ಖಾತೆ ಹೊಂದಿರುವ ತನ್ನ ಪತ್ನಿ ರೇವತಿ ಗೊರ್ರೆಯ ಖಾತೆಗೆ 2.69 ಕೋಟಿ ರೂ. ಹಣ ವರ್ಗಾವಣೆ ಮಾಡಿ ಬ್ಯಾಂಕಿಗೆ ವಂಚನೆ ಮಾಡಿದ್ದಾನೆ.

ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ದೂರು ನೀಡಿದ್ದಾರೆ. ಆದರೆ ಸದ್ಯ ಆರೋಪಿ ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸದ್ಯ ಈ ಪ್ರಕರಣದಿಂದಾಗಿ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದವರಲ್ಲಿ ಆತಂಕ ಮನೆ ಮಾಡಿದೆ.

Edited By : Nirmala Aralikatti
Kshetra Samachara

Kshetra Samachara

11/09/2022 11:23 pm

Cinque Terre

4.56 K

Cinque Terre

0

ಸಂಬಂಧಿತ ಸುದ್ದಿ