ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಒಂದೂವರೆ ಲಕ್ಷ ಮೌಲ್ಯದ ಗೋವಾ ಮದ್ಯ ವಶಕ್ಕೆ; ಹೆದ್ದಾರಿಯಲ್ಲೇ ಕಾರು ಬಿಟ್ಟು ಪರಾರಿಯಾದ ಚಾಲಕ

ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ ಒಂದೂವರೆ ಲಕ್ಷ ರೂ. ಮೌಲ್ಯದ ಗೋವಾ ಮದ್ಯವನ್ನ ಹಾಗೂ ಸಾಗಾಟಕ್ಕೆ ಬಳಸಿದ 5 ಲಕ್ಷ ರೂ. ಮೌಲ್ಯದ ಹ್ಯುಂಡೈ ವೆರ್ನ ಕಾರನ್ನ ಪೊಲೀಸರು ಜಪ್ತಿಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ಅವರಿಗೆ ಬಂದ ಮಾಹಿತಿಯಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬದರಿನಾಥ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ವಿಶೇಷ ವಿಭಾಗದ ಪಿಎಸ್ಐ ಪ್ರೇಮನಗೌಡ ಪಾಟೀಲ್, ಅವರ ತಂಡ ಖಚಿತ ಮಾಹಿತಿಯಾಧಾರದಲ್ಲಿ ಗೋವಾ ರಾಜ್ಯದಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರದ ಕಡೆಗೆ ಬರುತ್ತಿದ್ದ ಹ್ಯಂಡೈ ವೆರ್ನ ಕಾರನ್ನ ಪರಿಶೀಲಿಸಲು ಸದಾಶಿವಗಡದ ದೇವಭಾಗ ಕ್ರಾಸ್ ನಲ್ಲಿ ಬ್ಯಾರಿಕೇಡ್ ಹಾಕಿ ಪಹರೆ ನಿಂತಿದ್ದರು.

ಇದನ್ನು ದೂರದಿಂದಲೇ ಕಂಡು ಭಯಬೀತನಾದ ಚಾಲಕ ಕಾರನ್ನ ಹೆದ್ದಾರಿಯಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಬಳಿಕ ಕಾರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ 27 ಪಾಲಿಥಿನ್ ಚೀಲಗಳಲ್ಲಿ 770 ಲೀ. ಗೋವಾ ರಾಜ್ಯದ ಮದ್ಯದ ಬಾಟಲಿಗಳು ಪತ್ತೆಯಾಗಿವೆ.

ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತನ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ. ಇನ್ನು ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಗೆ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

13/09/2022 11:48 am

Cinque Terre

5.54 K

Cinque Terre

0

ಸಂಬಂಧಿತ ಸುದ್ದಿ